ಬಳ್ಳಾರಿ: ಆಂಧ್ರಪ್ರದೇಶದ ಜಾಜರಕಲ್ ಟೋಲ್ ಪ್ಲಾಜಾ ಬಳಿ ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತ ಚಾಲಕನನ್ನು ದೀಕ್ಷಿತ್ ಎಂದು ಗುರುತಿಸಲಾಗಿದೆ. ಮುಂದೆ ಸಾಗುತ್ತಿದ್ದ 12 ಚಕ್ರದ ಲಾರಿಗೆ ಹಿಂದಿನಿಂದ ಅತಿ ವೇಗವಾಗಿ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಕ್ಯಾಬಿನ್‌ನಲ್ಲಿ ಸಿಲುಕಿದ್ದ ಚಾಲಕ ದೀಕ್ಷಿತ್ ಬೆಂಕಿಯಿಂದ ಹೊರಬರಲಾಗದೆ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರೂ ಎರಡು ಲಾರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ದುರಂತದಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಹಿರೇಹಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

