Breaking News

ರಾಯಚೂರಲ್ಲಿ ಆರ್‌ಟಿಒ ಸಿಬ್ಬಂದಿ ಗೂಂಡಾಗಿರಿ: 500 ರೂ. ಲಂಚ ಪಡೆಯುತ್ತಿದ್ದ ವಿಡಿಯೋ ಮಾಡಿದ್ದಕ್ಕೆ ಚಾಲಕನಿಗೆ ಧರ್ಮದೇಟು

ರಾಯಚೂರಿನ ಸಿರವಾರ ಬಳಿ ಆರ್‌ಟಿಒ ಸಿಬ್ಬಂದಿ ಲಾರಿಯನ್ನು ತಡೆದು, ದಾಖಲೆಗಳು ಸರಿಯಾಗಿದ್ದರೂ ₹500 ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲಂಚ ಪಡೆಯುವ ದೃಶ್ಯವನ್ನು ಚಿತ್ರೀಕರಿಸಲು ಯತ್ನಿಸಿದ ಚಾಲಕನ ಮೇಲೆ ಸಿಬ್ಬಂದಿ ಹಲ್ಲೆ ನಡೆಸಿ, ಮೊಬೈಲ್ ಹಾಗೂ ಲಾರಿ ಕೀಯನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕೀ ಕಸಿದುಕೊಂಡ ಪರಿಣಾಮ ಲಾರಿ ಸೇತುವೆಯ ಮೇಲೆ ಅಡ್ಡವಾಗಿ ನಿಂತು ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದ ಲಿಂಗಸುಗೂರು–ರಾಯಚೂರು ರಸ್ತೆಯಲ್ಲಿ ಸುಮಾರು 3 ಗಂಟೆಗಳ ಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಘಟನೆಯಿಂದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಿತ ಆರ್‌ಟಿಒ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *