ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 9 ಆರೋಪಿಗಳನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಮತ್ತೊಬ್ಬ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ರಿಮ್ಯಾಂಡ್ ಹೋಂಗೆ ದಾಖಲಿಸಲಾಗಿದೆ. ಜೂನ್ 3ರಂದು ನಡೆದ ಈ ಪ್ರಕರಣದಲ್ಲಿ ಆರೋಪಿಗಳು ಕೃತ್ಯದ ವಿಡಿಯೋ ಚಿತ್ರೀಕರಿಸಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರೆಂದು ಆರೋಪಿಸಲಾಗಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಬಸವಾಪಟ್ಟಣ ಪೊಲೀಸರು 10 ಮಂದಿಯನ್ನು ಬಂಧಿಸಿದ್ದರು. ವಿಡಿಯೋ ವೈರಲ್ ಆದ ನಂತರ ಆರೋಪಿಗಳು ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಫೋಟೋ ಮತ್ತು ವಿಡಿಯೋಗಳನ್ನು ಡಿಲೀಟ್ ಮಾಡಲು ಯತ್ನಿಸಿದ್ದರೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಪೊಲೀಸ್ ಇಲಾಖೆ ಮುಂದಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

