Breaking News

ವಿದ್ಯಾರ್ಥಿನಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ: 5 ಜನ ಅರೆಸ್ಟ್

ಚಿಕ್ಕಮಗಳೂರಿನಲ್ಲಿ ಅಪ್ರಾಪ್ತ ಬಾಲಕಿಯನ್ನು ಬ್ಲಾಕ್‌ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಮತ್ತೊಬ್ಬ ಆರೋಪಿ ನ್ಯಾಯಾಲಯದ ಮುಂದೆ ಶರಣಾಗಿದ್ದಾನೆ. 17 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ ಬಳಿಕ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಒಂದು ವರ್ಷದ ಹಿಂದೆ ಬಾಲಕಿಯ ಫೋಟೋಗಳನ್ನು ಬಳಸಿಕೊಂಡು ಆರೋಪಿಗಳು ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *