Breaking News

ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಸಂಘರ್ಷ

ಕುಂದಾಣ(ದೇವನಹಳ್ಳಿ): ತಾಲ್ಲೂಕಿನ ಕುಂದಾಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಂಗಳವಾರ ತಡರಾತ್ರಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಸಂಘರ್ಷ ಸಂಭವಿಸಿ, ಎಂಟಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಒಂದು ವಿದ್ಯಾರ್ಥಿಗಳ ಗುಂಪು ಬೆಲ್ಟ್‌ ಗಳಿಂದಮತ್ತೊಂದು ಗುಂಪಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ವಸತಿ ನಿಲಯದಲ್ಲಿ ಕೆಲವು ವಿದ್ಯಾರ್ಥಿಗಳು ತಮ್ಮ ಮಾತು ಕೇಳುತ್ತಿಲ್ಲ. ಬಟ್ಟೆ ಒಗೆದು ಕೊಡುತ್ತಿಲ್ಲ ಹಾಗೂ ಹೋಂವರ್ಕ್‌ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಇತರ ವಿದ್ಯಾರ್ಥಿಗಳ ವಸತಿ ಕೊಠಡಿಗಳಿಗೆ ನುಗ್ಗಿ ಹಲ್ಲೆ ನಡೆಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬುಧವಾರ ಬೆಳಿಗ್ಗೆ ಶಾಲೆಗೆ ಆಗಮಿಸಿದ ಪೋಷಕರು, ಶಿಕ್ಷಕರು ಹಾಗೂ ಹಾಸ್ಟೆಲ್‌ ವಾರ್ಡನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿದ ವಿಶ್ವನಾಥಪುರ ಪೊಲೀಸರು ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪಾಂಡುರಂಗ ಅವರು ಘಟನೆಯ ಕುರಿತು ಮಾಹಿತಿ ಸಂಗ್ರಹಿಸಿದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *