ರಾಣೆಬೆನ್ನೂರು: ಮಹಿಳೆಯೊಬ್ಬರು ಕಾರು ನಿಲ್ಲಿಸುವಾಗ ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ ಪರಿಣಾಮ ಎದುರಿಗಿದ್ದ ವ್ಯಕ್ತಿ ಮೇಲೆ ಕಾರು ಹರಿದು ಮೃತಪಟ್ಟ ಘಟನೆ ತಾಲೂಕಿನ ಚೌಡಯ್ಯ ದಾನಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ಅಜ್ಜಪ್ಪ ಶಿವಪ್ಪ ಕಳಸಣ್ಣನವರ (40) ಮೃತ ದುರ್ದೈವಿ. ಬೆಂಗಳೂರಿನ ಸುಜಾತಾ ಕೆ.ಎಂ.ಕಾರು ಹಾಯಿಸಿದ ಮಹಿಳೆ. ಅಜ್ಜಪ್ಪ ವಿದ್ಯುತ್ ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದ. ಸುಜಾತಾಳ ಜಮೀನಿನಲ್ಲಿ ವಿದ್ಯುತ್ ಪರಿವರ್ತಕದ ಕೆಲಸವಿದ್ದ ಕಾರಣ ಅವರ ಜಮೀನಿನ ಬಳಿ ಕೆಲಸ ಮಾಡುತ್ತಿದ್ದರು. ಈ ಸಮಯ ದಲ್ಲಿ ಕಾರಿನಲ್ಲಿ ಬಂದ ಸುಜಾತಾ ಅಜ್ಜಪ್ಪನನ್ನು ಮಾತನಾಡಿಸುವ ಸಲುವಾಗಿ ಕಾರು ನಿಲ್ಲಿಸಲು ಮುಂದಾದಾಗ ಬ್ರೇಕ್ ಬದಲು ಎಕ್ಸಿಲೇಟರ್ ಒತ್ತಿದ್ದಾಳೆ. ಇದರಿಂದ ಕಾರು ಎದುರಿಗೆ ನಿಂತಿದ್ದ ಅಜ್ಜಪ್ಪನ ಮೈ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಆತನನ್ನು ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ತೆರಳುವಾಗ ಮಾರ್ಗಮಧ್ಯೆ ಆತ ಮೃತಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

