Breaking News

ಶಿವಮೊಗ್ಗ : ಜೈಲಲ್ಲಿದ್ದಾಗ ನೋಡಲು ಬಂದಿಲ್ಲವೆಂದು ಪತ್ನಿಗೆ ಬೆದರಿಸಲು ಕಳುಹಿಸಿದ್ದ ಬುರ್ಖಾಧಾರಿಗಳಿಗೆ ಹಿಗ್ಗಾಮುಗ್ಗಾ ಥಳಿತ!

ಶಿವಮೊಗ್ಗ: ಮಹಿಳೆಗೆ ಬೆದರಿಕೆ ಹಾಕಲು ಬುರ್ಖಾ ಧರಿಸಿ ಬಂದಿದ್ದ ನಾಲ್ವರಲ್ಲಿ ಮೂವರನ್ನು ಸ್ಥಳೀಯರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗದ ಕೆ.ಆರ್. ಪುರಂ ರಸ್ತೆಯಲ್ಲಿ ನಡೆದಿದೆ. ಬಂಧಿತರನ್ನು ಬೊಮ್ಮನಕಟ್ಟೆಯ ಅಸ್ಲಾಂ, ಮಹೇಶ್ ಹಾಗೂ ದರ್ಶನ್ ಎಂದು ಗುರುತಿಸಲಾಗಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಮಹಿಳೆಯನ್ನು ಹೆದರಿಸುವ ಉದ್ದೇಶದಿಂದ ಇವರು ಬಂದಿದ್ದರು ಎನ್ನಲಾಗಿದೆ. ಕೊಲೆ ಪ್ರಕರಣದ ವಿಚಾರಣಾಧೀನ ಕೈದಿಯೊಬ್ಬ ತನ್ನ ಪತ್ನಿಗೆ ಬೆದರಿಕೆ ಹಾಕಲು ಜೈಲಿನಿಂದಲೇ ಸೂಚನೆ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *