Breaking News

ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನ ಸಾಗಾಟ: ಬೆಂಗಳೂರು ಏರ್ ಪೋರ್ಟ್ ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ಜಪ್ತಿ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ₹1.37 ಕೋಟಿ ಮೌಲ್ಯದ 899.50 ಗ್ರಾಂ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಬಂದ ಪ್ರಯಾಣಿಕನ ಬಳಿ 4 ಕ್ಯಾಪ್ಸುಲ್‌ಗಳಲ್ಲಿ ಅಡಗಿಸಿ ಚಿನ್ನ ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಆಗಮಿಸಿದ್ದ ಪ್ರಯಾಣಿಕನ ಬಳಿ ₹1.75 ಕೋಟಿ ಮೌಲ್ಯದ ಗಾಂಜಾ ಪತ್ತೆಯಾಗಿದ್ದು, ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *