Breaking News

6 ಸಾವಿರ ಕೊಟ್ರೆ ಒಂದು ವಿಷಯ ಪಾಸ್​​: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು

ಬಳ್ಳಾರಿ: ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಡಿಗ್ರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಣ ಪಡೆದು ಉತ್ತೀರ್ಣಗೊಳಿಸುವ ದಂಧೆ ನಡೆಯುತ್ತಿರುವ ಆರೋಪ ಕೇಳಿಬಂದಿದೆ. ವಿಶ್ವವಿದ್ಯಾಲಯದ ಕೆಲ ಸಿಬ್ಬಂದಿಯೇ ಈ ಅಕ್ರಮದಲ್ಲಿ ಭಾಗಿಯಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಒಂದು ವಿಷಯಕ್ಕೆ ₹6 ಸಾವಿರ ನಿಗದಿ ಮಾಡಿ ಹಣ ಪಡೆದರೆ ಫೇಲ್ ಆದ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ರೀತಿ ಹಲವು ವರ್ಷಗಳಿಂದ ದಂಧೆ ನಡೆಯುತ್ತಿದ್ದು, ಹಲವರು ಹಣ ನೀಡಿ ಉತ್ತೀರ್ಣರಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಕೆಲ ಸಿಬ್ಬಂದಿ ವಿದ್ಯಾರ್ಥಿಗಳ ಬಳಿ ಹಣ ಕೇಳಿರುವ ಆಡಿಯೋ ಸಹ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ವಿದ್ಯಾರ್ಥಿ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದಂಧೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಸಮಗ್ರ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *