Breaking News

ಕೋಲಾರದಲ್ಲಿ ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿಕೊಂಡು ವೃದ್ಧೆಯ ಕೊಲೆ : ಬೆಚ್ಚಿ ಬಿದ್ದ ಜನತೆ

ಸಾಲದ ಹಣ ವಾಪಸ್ ನೀಡುವುದಾಗಿ ನಂಬಿಸಿ 70 ವರ್ಷದ ವೃದ್ಧೆ ರೆಡ್ಡಮ್ಮ ಅವರನ್ನು ಕರೆಸಿಕೊಂಡು ಭೀಕರವಾಗಿ ಹತ್ಯೆ ಮಾಡಿದ ಘಟನೆ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ತಿಮ್ಮರಾಜು ಮತ್ತು ಮುನಿರಾಜು ಎಂಬ ಆರೋಪಿಗಳು ಮೇ 17ರಂದು ವೃದ್ಧೆಯನ್ನು ಕೊಲೆ ಮಾಡಿ, ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಕೆಂಚಾರ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಬಿಸಾಡಿದ್ದರು ಎನ್ನಲಾಗಿದೆ. ವೃದ್ಧೆ ನಾಪತ್ತೆ ಪ್ರಕರಣದ ತನಿಖೆ ವೇಳೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ. ರಾಯಲಪಾಡು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *