Breaking News

ದಾವಣಗೆರೆ ಪೊಲೀಸರಿಂದ ₹57 ಲಕ್ಷ ಮೌಲ್ಯದ ಕಳವು ಸ್ವತ್ತು ವಶ, 5 ಆರೋಪಿಗಳ ಬಂಧನ

ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಅಮರಾವತಿ ಕಾಲೊನಿಯ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿ, ವಿಜಯನಗರ ಜಿಲ್ಲೆಯ ಹೊಸಪೇಟೆಯ ಟಿ. ಶ್ರೀಕಾಂತ (30) ಹಾಗೂ ವೈ. ರಮೇಶ್ (28) ಅವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 409 ಗ್ರಾಂ ಚಿನ್ನಾಭರಣ ಸೇರಿದಂತೆ ₹57.40 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ. ಮೇ 18ರಂದು ಪರೀಕ್ಷಿತ್ ನಾಯ್ಡು ಅವರ ಮನೆಗೆ ನುಗ್ಗಿದ ಕಳ್ಳರು ಬೀಗ ಒಡೆದು 483 ಗ್ರಾಂ ಚಿನ್ನಾಭರಣ ಹಾಗೂ ₹10 ಸಾವಿರ ನಗದು ಕಳವು ಮಾಡಿದ್ದರು. ಕುಟುಂಬದವರು ಹೊರ ಊರಿಗೆ ತೆರಳಿದ್ದ ವೇಳೆ ಈ ಕೃತ್ಯ ನಡೆದಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಕಳುವಾದ ಚಿನ್ನಾಭರಣದಲ್ಲಿ ಇನ್ನೂ 73 ಗ್ರಾಂ ಪತ್ತೆಯಾಗಬೇಕಿದೆ. ಸಾರ್ವಜನಿಕರು ಮನೆಗೆ ಬೀಗ ಹಾಕಿ ಹಲವು ದಿನ ಹೊರಗಡೆ ಹೋಗುವ ಸಂದರ್ಭದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *