ಬೆಳ್ತಂಗಡಿ: ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಔಷಧ ಆಸ್ಪತ್ರೆಯ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ 25 ವರ್ಷಗಳಿಂದ ಕರ್ತವ್ಯದಲ್ಲಿ ಇರುವ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿ ಚಂದ್ರಶೇಖರ್ ತನ್ನ ಆಸ್ಪತ್ರೆಯ ಮಹಿಳಾ ಸಿಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದು, ಬಹಿರಂಗಪಡಿಸಿದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಮಹಿಳೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

