Breaking News

ಮುಳಬಾಗಿಲು ಶಿಕ್ಷಕರ ಕಾಲೊನಿಯಲ್ಲಿ ಮನೆ ಬಾಗಿಲ ಬೀಗ ಒಡೆದು ಕಳವು

ಮನೆ ಬಾಗಿಲ ಬೀಗ ಒಡೆದು ಬೀರುವಿನಲ್ಲಿದ್ದ ನಗದು ಹಾಗೂ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ನಗರದ ಶಿಕ್ಷಕರ ಕಾಲೊನಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕ್ಷಕರ ಕಾಲೊನಿಯ ಬೇಕರಿ ಮಾಲೀಕ ರವಿಕುಮಾರ್ ಎಂಬುವವರ ಮನೆಯ ಬಾಗಿಲ ಬೀಗ ಒಡೆದು, ಬೀರುವಿನಲ್ಲಿದ್ದ 50 ಗ್ರಾಂ ಬಂಗಾರದ ಆಭರಣ, 1.5 ಕೆಜಿ ಬೆಳ್ಳಿ ಹಾಗೂ ₹1.72 ಲಕ್ಷ ನಗದನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ರವಿಕುಮಾರ್ ಕುಟುಂಬದವರು ಹಾಸನಕ್ಕೆ ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ. ಸ್ಥಳಕ್ಕೆ ನಗರ ಠಾಣೆ ಇನ್‌ಸ್ಪೆಕ್ಟರ್ ಸುಧಾಕರ್ ರೆಡ್ಡಿ ಹಾಗೂ ಶ್ವಾನದಳ ಬೆರಳಚ್ಚು ತಜ್ಞರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *