ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಬೈಕ್ ಸವಾರ ರಂಜನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ತುಮಕೂರಿನತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಈ ಅಪಘಾತಕ್ಕೆ ಒಳಗಾಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

