ಬೆಂಗಳೂರು ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ವರ್ಷದ ಬಾಲಕಿ ವೆನ್ನೆಲಾ ಕೊಲೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಠಾಣೆಯ ಇನ್‌ಸ್ಪೆಕ್ಟರ್, ಪಿಎಸ್‌ಐ ಹಾಗೂ ಕಾನ್‌ಸ್ಟೆಬಲ್ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದು ದೃಢಪಟ್ಟಿದ್ದರೂ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬವಾಗಿದ್ದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ತಲೆಮರೆಸಿಕೊಂಡಿದ್ದ ತಾಯಿ ಪ್ರಿಯಾಂಕಾಳನ್ನು ಪೊಲೀಸರು ಬಂಧಿಸಿದ್ದಾರೆ. ಮಗಳ ಕೊಲೆ ಪ್ರಕರಣದಲ್ಲಿ ತಾಯಿ ಪ್ರಿಯಾಂಕಾ ಹಾಗೂ ಆಕೆಯ ಪ್ರಿಯಕರ ಮೋಹನ್ ವಿರುದ್ಧ ಶಂಕೆ ವ್ಯಕ್ತವಾಗಿದ್ದು, ಮಗುವಿನ ತಂದೆ ನೀಡಿದ ದೂರಿನ ಆಧಾರದಲ್ಲಿ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

