Breaking News

ದೊಡ್ಡಬಳ್ಳಾಪುರದಲ್ಲಿ 6 ಕೆಜಿ ಗಾಂಜಾ ಜಪ್ತಿ: ಉತ್ತರ ಪ್ರದೇಶ ಮೂಲದ ಯುವಕ ಬಂಧನ

6 ಕೆಜಿ 126 ಗ್ರಾಂ ಒಣ ಗಾಂಜಾವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಆರೋಪದಡಿ ಯುವಕನೊಬ್ಬನನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉತ್ತರಪ್ರದೇಶ ಮುರಾಬಾದ್ ಮೂಲದ 23 ವರ್ಷದ ಮುಷರಫ್ ಅಲಿ ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ನಗರದ ಅರ್ಕಾವತಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು ಎನ್ನಲಾಗಿದೆ. ಆರೋಪಿಯು ನಗರದಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಉತ್ತರ ಪ್ರದೇಶದಿಂದ ದೊಡ್ಡಬಳ್ಳಾಪುರಕ್ಕೆ ಒಣ ಗಾಂಜಾವನ್ನು ತಂದು ತನ್ನ ಮನೆಯಲ್ಲಿ ಶೇಖರಿಸಿಟ್ಟಿದ್ದ, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 6 ಕೆಜಿ 126 ಗ್ರಾಂ ಅಕ್ರಮ ಒಣ ಗಾಂಜಾ ಜೊತೆಗೆ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *