ಬೆಂಗಳೂರು: ಶ್ರೀಗಂಧದ ಮರದ ತುಂಡುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಮಹಿಳೆ ಸೇರಿ ಇಬ್ಬರನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕನಕಪುರ ಕೊಳಗೊಂಡ ನಿವಾಸಿ ಮದುಮತ್ತಿ (39) ಹಾಗೂ ಈಕೆಯ ಸಂಬಂಧಿ ಕೇರಳ ಧರ್ಮಪುರಿಯ ನವೀನ್‌ಕುಮಾರ್(23) ಬಂಧಿತರು. ಆರೋಪಿಗಳಿಂದ 11 ಲಕ್ಷ ರೂ. ಮೌಲ್ಯದ ಶ್ರೀಗಂಧ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ನಗರದ ಲಗ್ಗೆರೆ ಪಕ್ಕದ ಸೇತುವೆ ಬಳಿ ಕಾರಿನಲ್ಲಿ 44.780 ಕೆ.ಜಿ.ತೂಕದ 68 ಶ್ರೀಗಂಧ ಮರದ ತುಂಡು ಸಾಗಿಸುತ್ತಿದ್ದರು. ಈ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮರದ ತುಂಡುಗಳ ಸಮೇತ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿ ನವೀನ್‌ಕುಮಾರ್ ವೆುಕ್ಯಾನಿಕಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡಿಕೊಂಡಿದ್ದು, ಉದ್ಯೋಗ ಸಿಗದಕ್ಕೆ ಚಾಲಕನಾಗಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದನು. ಹೊರ ರಾಜ್ಯದಿಂದ ಕಡಿಮೆ ಬೆಲೆಗೆ ಶ್ರೀಗಂಧದ ಮರದ ತುಂಡುಗಳನ್ನು ಖರೀದಿಸಿಕೊಂಡು ಬಂದು ನಗರದಲ್ಲಿ ಮಾರಾಟಕ್ಕೆ ಯತ್ನ ನಡಸಿದ್ದರು ಎಂದು ಪೊಲೀಸರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

