ಆನಂದಪುರ: ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು 1 ಹಸು, 2 ಹೋರಿ ಕರಗಳು ಹಾಗೂ ವಾಹನವನ್ನು ವಶಪಡಿಸಿಕೊಂಡ ಘಟನೆ ಜೂ.11ರ ಗುರುವಾರ ಸಂಜೆ ನಡೆದಿದೆ. ಬಟ್ಟೆ ಮಲ್ಲಪ್ಪದಿಂದ ಆನಂದಪುರದ ಕಡೆಗೆ ಲಗೇಜ್ ಪಿಕಪ್ ವಾಹನದಲ್ಲಿ ಜಾನುವಾರಗಳನ್ನು ಸಾಗಿಸುತ್ತಿದ್ದ ವಿಷಯ ತಿಳಿದು ಬಸವನ ಹೋಂಡ ಬಳಿ ಪೊಲೀಸರು ವಾಹನ, ಜಾನುವಾರ ಸಮೇತ ಇಬ್ಬರನ್ನು ಬಂಧಿಸಿದ್ದಾರೆ. ಜಾನುವಾರುಗಳನ್ನು ಹಿಂಸಾತ್ಮಕವಾಗಿ ಬಂಧಿಸಿದ್ದು, ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾಕಾಟ ಮಾಡುತ್ತಿದ್ದ ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆಂಜನೇಯ, ಮಾಲ್ತೇಶ್ ಎಂಬವರ ಮೇಲೆ ಪ್ರಕರಣ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

