Breaking News

ಜೈಲಿನಲ್ಲಿಯೇ ಸಾವನ್ನಪ್ಪಿದ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಉಗ್ರ

ಬೆಂಗಳೂರು: 2008ರ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಶಂಕಿತ ಉಗ್ರ ಅಬ್ದುಲ್ ಖಾದರ್ (60) ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ವೇಳೆ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಪ್ರಕರಣದ ತೀರ್ಪು ಕೆಲವೇ ದಿನಗಳಲ್ಲಿ ಪ್ರಕಟವಾಗುವ ಸಾಧ್ಯತೆ ಇದ್ದಾಗಲೇ ಈ ಘಟನೆ ನಡೆದಿದೆ. 2010ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಅಬ್ದುಲ್ ಖಾದರ್ ಅವರ ಆರೋಗ್ಯದಲ್ಲಿ ಗುರುವಾರ ಏಕಾಏಕಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ಮೂಲದ ಅಬ್ದುಲ್ ಖಾದರ್ 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದು, ಈ ಸಂಬಂಧ ಎನ್‌ಐಎ ಬಂಧಿಸಿತ್ತು. ಪ್ರಕರಣದ ವಿಚಾರಣೆ ಅಂತಿಮ ಹಂತದಲ್ಲಿದ್ದು, ನ್ಯಾಯಾಲಯದ ತೀರ್ಪು ಹೊರಬೀಳುವ ಮುನ್ನವೇ ಆರೋಪಿ ಮೃತಪಟ್ಟಿರುವುದು ಗಮನಾರ್ಹವಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *