ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಎನರ್ಜಿ ಡ್ರಿಂಕ್ಸ್ ಅತಿಯಾಗಿ ಸೇವಿಸಿದ್ದರಿಂದ 18 ವರ್ಷದ ಬಾಲು ದೇಸಾಯಿ ಮೃತಪಟ್ಟಿರುವ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಯುವಕ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಎನರ್ಜಿ ಡ್ರಿಂಕ್ಸ್ ಸೇವಿಸುತ್ತಿದ್ದ ಎಂದು ತಿಳಿದುಬಂದಿದೆ. ಈ ಘಟನೆಯ ಬಳಿಕ ಗ್ರಾಮಸ್ಥರು ಒಟ್ಟಾಗಿ ಸೇರಿ, ಇನ್ಮುಂದೆ ಗ್ರಾಮದಲ್ಲಿ ಎನರ್ಜಿ ಡ್ರಿಂಕ್ಸ್ ಸೇವನೆ ಹಾಗೂ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಅಲ್ಲದೆ, ಅಂಗಡಿಗಳಲ್ಲಿದ್ದ ಎನರ್ಜಿ ಡ್ರಿಂಕ್ಸ್ ಬಾಟಲಿಗಳನ್ನು ವಶಕ್ಕೆ ಪಡೆದು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಯುವಕನ ಸಾವಿಗೆ ನಿಖರ ಕಾರಣ ಏನು ಎಂಬುದು ವೈದ್ಯಕೀಯ ಮತ್ತು ಪೊಲೀಸ್ ತನಿಖೆಯಿಂದಲೇ ದೃಢಪಡಿಸಬೇಕಾಗಿದ್ದು, ಎನರ್ಜಿ ಡ್ರಿಂಕ್ಸ್ ಕಾರಣ ಎಂಬುದು ಸದ್ಯದ ಆರೋಪವಾಗಿದೆ. ಈ ಘಟನೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

