ಉಡುಪಿ: ಮಾದಕ ದ್ರವ್ಯ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಡಗಬೆಟ್ಟು ನಿವಾಸಿ ಜಗದೀಶ ಪೂಜಾರಿ ಎಂಬಾತನನ್ನು ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧಿಸಲಾಗಿದೆ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಆದೇಶ ಹೊರಡಿಸಿದ್ದರು. ಬಂಧಿತ ಜಗದೀಶ್ ಪೂಜಾರಿ ವಿರುದ್ಧ ಉಡುಪಿ ಜಿಲ್ಲೆಯ ಮಣಿಪಾಲ ಮತ್ತು ಸೆನ್ ಅಪರಾಧ ಪೊಲೀಸ್ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು ಮೂರು ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ದಾಖಲಾದ ಪ್ರಕರಣಗಳಲ್ಲಿ ಒಂದು ಪ್ರಕರಣವು ನ್ಯಾಯಾಲಯದ ವಿಚಾರಣೆಯಲ್ಲಿದ್ದು ಉಳಿದ 2 ಪ್ರಕರಣಗಳು ತನಿಖೆಯಲ್ಲಿರುತ್ತದೆ. ದಾಖಲಾದ ಎರಡು ಸೇವನೆ ಪ್ರಕರಣಗಳಲ್ಲಿ ಶಿಕ್ಷೆ ಆಗಿರುತ್ತದೆ. ಬಂಧಿತ ಆರೋಪಿಯನ್ನು ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

