ಮೈಸೂರಿನಲ್ಲಿ ತಾಯಿಯೊಬ್ಬರು ತಮ್ಮ ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪ್ರಿಯಾಂಕಾ (26) ಅವರು ತಮ್ಮ ಮಕ್ಕಳಾದ ಧೃತಿ (3) ಮತ್ತು ದಿಶಾ (1.5) ಅವರನ್ನು ಹತ್ಯೆಗೈದು, ನಂತರ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬ ಕಲಹ ಮತ್ತು ಇತರೆ ವೈಯಕ್ತಿಕ ಕಾರಣಗಳು ಈ ದುರ್ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಘಟನೆಯ ನಿಖರ ಕಾರಣವನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

