Breaking News

ಸಸ್ಪೆಂಡ್ ಶಾಕ್.. ಜೈಲರ್ ಆತ್ಮಹತ್ಯೆ..! ಧಾರವಾಡ ಕೇಂದ್ರ ಕಾರಾಗೃಹದಲ್ಲಿ ದಾರುಣ ಅಂತ್ಯ..

ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ದರಾಮಪ್ಪ ವಡ್ಡರ್ (33) ಅವರು ಕಾರಾಗೃಹ ವಸತಿ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಘಟನೆ ಸಂಚಲನ ಮೂಡಿಸಿದೆ. ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಢ ನಿವಾಸಿಯಾಗಿದ್ದ ಅವರು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎರಡು ತಿಂಗಳ ಹಿಂದೆ ಕಾರಾಗೃಹದಲ್ಲಿ ನಡೆದಿದ್ದ ಕಾನೂನುಬಾಹಿರ ಚಟುವಟಿಕೆ ಪ್ರಕರಣದ ಹಿನ್ನೆಲೆ ಅವರನ್ನು ಅಮಾನತುಗೊಳಿಸಲಾಗಿತ್ತು. ಬಳಿಕ ಮೈಸೂರಿಗೆ ವರ್ಗಾವಣೆ ಮಾಡಲಾಗಿದ್ದರೂ, ಅಮಾನತು ಆದೇಶ ಮುಂದುವರಿದಿದ್ದರಿಂದ ಅವರು ಮಾನಸಿಕ ಒತ್ತಡದಲ್ಲಿದ್ದರು ಎನ್ನಲಾಗಿದೆ. ಘಟನೆ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ನಿಖರ ಕಾರಣವನ್ನು ಪೊಲೀಸರು ತನಿಖೆ ಮೂಲಕ ಪತ್ತೆಹಚ್ಚುತ್ತಿದ್ದಾರೆ. ಕುಟುಂಬಸ್ಥರು ಮತ್ತು ಸಹೋದ್ಯೋಗಿಗಳಿಂದಲೂ ಮಾಹಿತಿ ಸಂಗ್ರಹಿಸಲಾಗುತ್ತಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *