Breaking News

ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಘೋರ ದುರಂತ : ಶಾಲಾ ಬಸ್ ಹರಿದು ಮಗಳ ಕಣ್ಣೆದುರೇ ತಾಯಿ ಸಾವು.!

ಬೆಂಗಳೂರು ವೈಟ್‌ಫೀಲ್ಡ್ ಪ್ರದೇಶದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಮಹಿಳೆಯೊಬ್ಬರು ಶಾಲಾ ಬಸ್‌ಗೆ ಡಿಕ್ಕಿಯಾಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಾಂತ ಎಂಬ ಮಹಿಳೆ ತಮ್ಮ ಮಗಳು ನೇಹಾ ಅವರನ್ನು ಕಾಲೇಜಿಗೆ ಬಿಡಲು ತೆರಳಿದ್ದಾಗ ರಸ್ತೆ ದಾಟುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಮಹಿಳೆ ಬಸ್ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆವನ್ನು ಮಗಳು ಕಣ್ಣಾರೆ ನೋಡಬೇಕಾದ ಪರಿಸ್ಥಿತಿ ಎದುರಾಗಿದ್ದು, ಸ್ಥಳದಲ್ಲಿದ್ದವರನ್ನೂ ಕಂಬನಿ ಮಿಡಿಯುವಂತೆ ಮಾಡಿದೆ. ಘಟನೆಗೆ ಶಾಲಾ ಬಸ್ ಚಾಲಕರ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ವೈಟ್‌ಫೀಲ್ಡ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *