ಶಿವಮೊಗ್ಗ ಜಿಲ್ಲೆಯ ರವೀಂದ್ರ ನಗರದಲ್ಲಿ ಮನಕಲಕುವ ಘಟನೆ ನಡೆದಿದ್ದು, ಮನೆಯೊಂದರಲ್ಲಿ 57 ವರ್ಷದ ಪ್ರಭಾವತಿ ಹಾಗೂ ಅವರ ಸಾಕು ನಾಯಿಯ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಹಲವು ದಿನಗಳ ಹಿಂದೆಯೇ ಮಹಿಳೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ಆಕೆಯ ಸಾವಿನ ಬಳಿಕ ಮನೆಯೊಳಗೇ ಇದ್ದ ನಾಯಿ ಕೂಡ ಆಹಾರ ಮತ್ತು ಆರೈಕೆ ಸಿಗದೆ ಸಾವನ್ನಪ್ಪಿರುವ ಸಾಧ್ಯತೆ ವ್ಯಕ್ತವಾಗಿದೆ. ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಯ ಬಾಗಿಲು ತೆರೆಯಿಸಿ ಪರಿಶೀಲನೆ ನಡೆಸಿದಾಗ ಮಹಿಳೆ ಹಾಗೂ ನಾಯಿಯ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಹಿಳೆಯ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಮರಣದ ನಿಜವಾದ ಕಾರಣ ಮರಣೋತ್ತರ ಪರೀಕ್ಷೆಯ ವರದಿ ಬಳಿಕವೇ ಸ್ಪಷ್ಟವಾಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

