Breaking News

ಮುಳುಗಡೆ ಸಂತ್ರಸ್ತ ರೈತನಿಂದ ಪ್ರಾಧಿಕಾರದ ನೌಕರನಿಗೆ ಚಪ್ಪಲಿ ಏಟು!

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮುಳುಗಡೆ ಸಂತ್ರಸ್ತ ರೈತ ಬಸಪ್ಪ ಹಾಗೂ ಪ್ರಥಮ ದರ್ಜೆ ನೌಕರ (ಎಫ್‌ಡಿಎ) ಅಂಕದ ನಡುವೆ ಪರಿಹಾರ ವಿಚಾರವಾಗಿ ತೀವ್ರ ವಾಗ್ವಾದ ನಡೆದಿದೆ. ಪರಿಹಾರ ನೀಡುವಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ರೈತ ಹಲವು ದಿನಗಳಿಂದ ಕಚೇರಿಗೆ ಅಲೆದಾಡುತ್ತಿದ್ದರು ಎನ್ನಲಾಗಿದೆ. ಇಂದು ಕಚೇರಿಯಲ್ಲಿ ನಡೆದ ಮಾತಿನ ಚಕಮಕಿ ಜಗಳಕ್ಕೆ ತಿರುಗಿದ್ದು, ಇಬ್ಬರೂ ಪರಸ್ಪರ ತಳ್ಳಾಟ ನಡೆಸಿದ್ದಾರೆ. ಈ ವೇಳೆ ಆಕ್ರೋಶಗೊಂಡ ರೈತ ಬಸಪ್ಪ ತಾನು ಧರಿಸಿದ್ದ ಚಪ್ಪಲಿಯಿಂದ ನೌಕರನಿಗೆ ಸಾರ್ವಜನಿಕವಾಗಿಯೇ ಥಳಿಸಿದ್ದಾರೆ. ಘಟನೆ ಬಳಿಕ ಕಚೇರಿ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸಿಬ್ಬಂದಿ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ಘಟನೆ ಕುರಿತು ಚರ್ಚೆ ಮುಂದುವರಿದಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *