Breaking News

ಗಾಂಜಾ ಸೇವಿಸಿ ದುರ್ವರ್ತನೆ ತೋರಿದ ಮೂವರ ಸೆರೆ

ಚಿಂತಾಮಣಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಮೂವರು ಯುವಕರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ವೆಂಕಟಗಿರಿಕೋಟೆ ಬಡಾವಣೆ ನಿವಾಸಿ ಸಲ್ಮಾನ್ ಪಾಷ (26), ಎನ್. ಜಿಶಾನ್ (23) ಹಾಗೂ ಶಾಂತಿನಗರ ನಿವಾಸಿ ಮೊಹಮದ್ ಅಲಿ ಅರ್ಬಾಜ್ (22) ಬಂಧಿತರು. ಬುಧವಾರ ನಗರದ ವಿವಿಧ ಪ್ರದೇಶಗಳಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ಹಾಗೂ ದುರ್ವರ್ತನೆ ತೋರಿದ ಆರೋಪವೂ ಇವರ ಮೇಲಿದೆ. ಮೂವರ ವಿರುದ್ಧ ಚಿಂತಾಮಣಿ ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *