ಹರಿಯಾಣದ ಗುರುಗ್ರಾಮ್‌ನಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಹಾಗೂ ಗೋರಕ್ಷಕರು ಸುಮಾರು 35 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿದ ರೋಚಕ ಘಟನೆ ನಡೆದಿದೆ. ಪೊಲೀಸರನ್ನು ತಪ್ಪಿಸಿಕೊಳ್ಳಲು ಆರೋಪಿಗಳು ಚಲಿಸುತ್ತಿದ್ದ ವಾಹನದಿಂದಲೇ ಜೀವಂತ ಹಸುಗಳನ್ನು ರಸ್ತೆಗೆ ಎಸೆದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ದೆಹಲಿ-ಜೈಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಹೈ-ಸ್ಪೀಡ್ ಚೇಸಿಂಗ್ ವೇಳೆ ಆರೋಪಿಗಳು ಬೆನ್ನಟ್ಟುತ್ತಿದ್ದವರ ಮೇಲೆ ಗುಂಡಿನ ದಾಳಿಯನ್ನೂ ನಡೆಸಿದ್ದಾರೆ. ರಸ್ತೆಗೆ ಎಸೆಯಲ್ಪಟ್ಟ ಹಸುಗಳಿಗೆ ಗಂಭೀರ ಗಾಯಗಳಾಗಿದ್ದು, ವಾಹನವನ್ನು ತಡೆಯಲು ಪೊಲೀಸರು ನಿರಂತರ ಪ್ರಯತ್ನ ನಡೆಸಿದರು. ಅಂತಿಮವಾಗಿ ಟ್ರಕ್‌ನ ಟೈರ್ ಪಂಕ್ಚರ್ ಮಾಡಿ ವಾಹನವನ್ನು ನಿಲ್ಲಿಸಿದ ಪೊಲೀಸರು, ಪರಾರಿಯಾಗಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗಾಯಗೊಂಡ ಹಸುಗಳನ್ನು ರಕ್ಷಿಸಿ ಗೋಶಾಲೆಗೆ ಕಳುಹಿಸಲಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಪ್ರಕರಣ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

