Breaking News

ನಕ್ಸಲ್ ಫಂಡಿಂಗ್ ಆರೋಪ: 7 ಜನರ ವಿರುದ್ಧ ಎಫ್‌ಐಆರ್

ಭಾರತದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಅಕ್ರಮ ಹಣಕಾಸು ನೆರವು ನೀಡಿದ ಆರೋಪದಡಿ ಅಮೆರಿಕಾ ಮೂಲದ ಸಂಸ್ಥೆ ಸೇರಿದಂತೆ ಕರ್ನಾಟಕದ ನಾಲ್ವರು ಸೇರಿ ಏಳು ಜನರ ವಿರುದ್ಧ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇಡಿ ನೀಡಿದ ದೂರಿನ ಮೇರೆಗೆ ಯುಎಪಿಎ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ಒಳಸಂಚು, ವಂಚನೆ ಮತ್ತು ಸುಳ್ಳು ದಾಖಲೆ ಸೃಷ್ಟಿಸಿದ ಆರೋಪಗಳನ್ನು ದಾಖಲಿಸಲಾಗಿದೆ. ತನಿಖೆಯಲ್ಲಿ 95 ಕೋಟಿ ರೂಪಾಯಿಗೂ ಅಧಿಕ ವಿದೇಶಿ ಹಣದ ಅಕ್ರಮ ಬಳಕೆ ನಡೆದಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಆರೋಪಿಗಳು ವಿದೇಶಿ ಡೆಬಿಟ್ ಕಾರ್ಡ್‌ಗಳ ಮೂಲಕ ಹಣ ವರ್ಗಾವಣೆ ನಡೆಸಿ, ಅದನ್ನು ಧರ್ಮೋಪದೇಶ ಹಾಗೂ ಎಡಪಂಥೀಯ ಉಗ್ರವಾದದ ಚಟುವಟಿಕೆಗಳಿಗೆ ಬಳಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದ ಕುರಿತು ಪೊಲೀಸರು ಹಾಗೂ ಇಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *