Breaking News

ಕಾಸರಗೋಡು| ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ; ಮಹಿಳೆಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕೇರಳದ ಕಣ್ಣೂರು ಜಿಲ್ಲೆಯ ಪುಳಿಪ್ಪರಂಬದಲ್ಲಿ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 25 ವರ್ಷದ ಸ್ನೇಹ ಮೆರ್ಲಿನ್ ವಿರುದ್ಧ ಮೇಲ್ಪರಂಬ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ಬಾಲಕಿಯ ತಾಯಿಯ ಸ್ನೇಹಿತೆಯಾಗಿದ್ದು, ಮನೆಗೆ ಭೇಟಿ ನೀಡಿದ್ದ ವೇಳೆ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮನೆಯಲ್ಲಿ ಮಲಗಿದ್ದ ಸಂದರ್ಭ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ ಎನ್ನಲಾಗಿದೆ. ಘಟನೆಯ ಬಳಿಕ ಭಯ ಮತ್ತು ಮಾನಸಿಕ ಆಘಾತದಿಂದ ಬಾಲಕಿ ವಿಷಯವನ್ನು ಯಾರಿಗೂ ತಿಳಿಸಿರಲಿಲ್ಲ. ಆದರೆ ಇತ್ತೀಚೆಗೆ ಶಾಲೆಯಲ್ಲಿ ನಡೆದ ಕೌನ್ಸಿಲಿಂಗ್ ವೇಳೆ ತನ್ನ ಮೇಲಾದ ದೌರ್ಜನ್ಯವನ್ನು ಬಹಿರಂಗಪಡಿಸಿದ್ದಾಳೆ. ಚೈಲ್ಡ್‌ಲೈನ್ ಅಧಿಕಾರಿಗಳ ಮಾಹಿತಿಯ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ. ಆರೋಪಿ ಸ್ನೇಹ ಮೆರ್ಲಿನ್ ವಿರುದ್ಧ ಈ ಹಿಂದೆಯೂ ಎರಡು ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *