ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದ 75 ವರ್ಷದ ರೆಡ್ಡಮ್ಮ ಅವರನ್ನು ಸಾಲದ ಹಣ ಹಿಂದಿರುಗಿಸುವುದಾಗಿ ಕರೆಸಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿಗಳು ಮೃತದೇಹವನ್ನು ಚಿಂತಾಮಣಿ ತಾಲ್ಲೂಕಿನ ಕೆಂಚಾರಪಲ್ಲಿ ಅರಣ್ಯ ಪ್ರದೇಶದಲ್ಲಿ ಬಿಸಾಡಿದ್ದರು. ಮೇ 26ರಂದು ಸಾಲದ ಹಣ ವಾಪಸ್ ಪಡೆಯಲು ತೆರಳಿದ್ದ ರೆಡ್ಡಮ್ಮ ಮನೆಗೆ ಮರಳದ ಹಿನ್ನೆಲೆಯಲ್ಲಿ ಅವರ ಪುತ್ರ ಜೂನ್ 1ರಂದು ರಾಯಲ್ಪಾಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ವೇಳೆ ಸಾಲ ಪಡೆದಿದ್ದವರ ಮೇಲೆಯೇ ಪೊಲೀಸರಿಗೆ ಅನುಮಾನ ಮೂಡಿತ್ತು. ಚಿಂತಾಮಣಿ ತಾಲ್ಲೂಕಿನ ತಿಮ್ಮರಾಜು ಹಾಗೂ ಮುನಿರಾಜು ಅವರನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಅಂಜಿಲಾಗಾಗಿ ಶೋಧ ಮುಂದುವರಿದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

