Breaking News

ಮಾದಕ ದ್ರವ್ಯ ಸೇವನೆ, ಮಾರಾಟ ಪ್ರಕರಣ: ಆರೋಪಿ ಬಂಧನ

ಮಣಿಪಾಲ: ಮಾದಕ ದ್ರವ್ಯ ಸೇವನೆ, ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 80 ಬಡಗಬೆಟ್ಟು ಗ್ರಾಮದ ರಾಜೀವನಗರ ಎರಡನೇ ಕ್ರಾಸ್‌ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಜೂ.12ರಂದು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಮಣಿಪಾಲ ಮತ್ತು ಸೆನ್‌ ಅಪರಾಧ ಪೊಲೀಸ್‌ ಠಾಣೆಗಳಲ್ಲಿ ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟಕ್ಕೆ ಸಂಬಂಧಿಸಿ ಒಟ್ಟು 3 ಪ್ರಕರಣ ಹಾಗೂ ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿ 2 ಪ್ರಕರಣ ದಾಖಲಾಗಿವೆ. ಸಾಗಾಟ ಮತ್ತು ಮಾರಾಟಕ್ಕೆ ಸಂಬಂಧಿಸಿ ದಾಖಲಾದ ಪ್ರಕರಣಗಳ ಪೈಕಿ 1 ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಉಳಿದ 2 ಪ್ರಕರಣಗಳಿಗೆ ಸಂಬಂಧಿಸಿ ತನಿಖೆ ಮುಂದುವರಿದಿದೆ. ದಾಖಲಾದ 2 ಮಾದಕ ದ್ರವ್ಯ ಸೇವನೆ ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆಯಾಗಿದೆ. ಜಿಲ್ಲೆಯ ಪೊಲೀಸ್‌ ಅಧೀಕ್ಷಕರ ವರದಿಯ ಮೇರೆಗೆ ಪಶ್ಚಿಮ ವಲಯದ ಐಜಿಪಿ ಆರೋಪಿಯ ಬಂಧನಕ್ಕೆ ಆದೇಶ ಹೊರಡಿಸಿದ್ದು, ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಸೂಚಿಸಿದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *