Breaking News

ಹೆದ್ದಾರಿಯಲ್ಲಿ ವ್ಹೀಲಿಂಗ್‌: ಬೈಕ್‌ ವಶ, ಎಫ್‌ ಐಆರ್‌ ದಾಖಲು

ಶಿವಮೊಗ್ಗ – ಭದ್ರಾವತಿ ಮಾರ್ಗದ ಮಲವಗೊಪ್ಪದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಯುವಕನ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿ ಬೈಕ್‌ ವಶಪಡಿಸಿಕೊಂಡಿದ್ದಾರೆ. ಜೂ.12ರಂದು ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ನಗರದ ಮಲವಗೊಪ್ಪದ NH-69 ರಸ್ತೆಯಲ್ಲಿ KA-14-HE0823 ಸಂಖ್ಯೆಯ ಬೈಕ್ ವಾಹನದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ದೂರಿನ ಆಧಾರದ ಮೇಲೆ ಬೈಕ್‌ವಾಹನವನ್ನು ವಶಪಡಿಸಿಕೊಂಡು ಸವಾರನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281 ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆ, 1988 ರ ಕಲಂ 184, 177, 129, 194 ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *