Breaking News

ದಕ್ಷಿಣ ಕನ್ನಡದಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ : ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಔಷಧ ಉಗ್ರಾಣ ವಿಭಾಗದ ಮುಖ್ಯಸ್ಥ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿದೆ. ಕಿರುಕುಳ ಹಾಗೂ ಬೆದರಿಕೆಯಿಂದ ಬೇಸತ್ತ ಮಹಿಳೆ ಕೆಲಸಕ್ಕೆ ರಾಜೀನಾಮೆ ನೀಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಪ್ರಕಾರ, ಆರೋಪಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದು, ವಿಷಯ ಬಹಿರಂಗಪಡಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದರಿಂದ ಮಾನಸಿಕವಾಗಿ ನೊಂದ ಮಹಿಳೆ ಕೊನೆಗೆ ಹುದ್ದೆ ತೊರೆದು ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇತರ ಮಹಿಳೆಯರು ಹಾಗೂ ವಿದ್ಯಾರ್ಥಿನಿಯರಿಗೂ ಕಿರುಕುಳ ನೀಡಿರುವ ಆರೋಪಗಳ ಬಗ್ಗೆಯೂ ತನಿಖೆ ಮುಂದುವರಿದಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *