Breaking News

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ತೆಲಂಗಾಣ ಮೂಲದ ಯುವತಿಯ ರಕ್ಷಣೆ

ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿ ಯುವತಿಯನ್ನು ರಕ್ಷಿಸಿದ್ದಾರೆ. ಆಯೇಶಾ ಶಬ್ಬಿರ್ ಶೇಖ್ ಅಲಿಯಾಸ್ ರೇಷ್ಮಾ ಅಂಕಲೆವಾಲೆ (31) ಬಂಧಿತ ಆರೋಪಿ. ತೆಲಂಗಾಣ ಮೂಲದ ಯುವತಿಯನ್ನು ಮನೆಯಲ್ಲಿ ಇರಿಸಿಕೊಂಡು, ಗಿರಾಕಿಗಳನ್ನು ಕರೆಸಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದಳು ಎಂದು ಆರೋಪಿಸಲಾಗಿದೆ. ಸಿಪಿಐ ಪರಶುರಾಮ ಪೂಜೇರಿ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಯುವತಿಯನ್ನು ರಕ್ಷಿಸಿದ್ದು, ಆರೋಪಿಯ ವಿರುದ್ಧ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆ (PIT Act)-1956ರ ಕಲಂ 3, 4 ಹಾಗೂ 5ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *