ಬೆಂಗಳೂರಿನ ಬೆಳ್ಳಂದೂರಿನಲ್ಲಿ ಪ್ರೇಮ ಸಂಬಂಧ ದುರಂತ ಅಂತ್ಯ ಕಂಡಿದ್ದು, ಪ್ರಿಯಕರನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮುಂಜಾನೆ ನಡೆದಿದೆ. ಸಿಕ್ಕಿಂ ಮೂಲದ ಐಪಿ ಹಂಗ್ಮಾ (22) ಮೃತ ಯುವತಿಯಾಗಿದ್ದು, ಫುರ್ಬಾ ಲೇಪ್ಸಾ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆ ವಿಚಾರವಾಗಿ ಅವರ ನಡುವೆ ಮಾತುಕತೆ ನಡೆಯುತ್ತಿತ್ತು. ಆದರೆ ಈಗಲೇ ಮದುವೆಯಾಗಲು ಯುವತಿ ನಿರಾಕರಿಸಿದ್ದರಿಂದ ಹಾಗೂ ಆಕೆಗೆ ಬೇರೆ ಸಂಬಂಧ ಇರಬಹುದೆಂಬ ಅನುಮಾನದಿಂದ ಇಬ್ಬರ ನಡುವೆ ವಾಗ್ವಾದ ಉಂಟಾಗಿತ್ತು ಎನ್ನಲಾಗಿದೆ. ಆಕ್ರೋಶಗೊಂಡ ಆರೋಪಿ ಚಾಕುವಿನಿಂದ ದಾಳಿ ನಡೆಸಿ ಯುವತಿಯನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಮಾಹಿತಿ ಪಡೆದ ಬೆಳ್ಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

