Breaking News

ಕುಡಿದ ಮತ್ತಿನಲ್ಲಿ ಹಲ್ಲೆ: ಮುಳಬಾಗಿಲು ವ್ಯಕ್ತಿ ಸೆರೆ, ಇತರರಿಗಾಗಿ ಬಲೆ

ಕುಡಿದ ಅಮಲಿನಲ್ಲಿ ಬಾರ್ ಕ್ಯಾಷಿಯರ್ ಮೇಲೆ ಹಲ್ಲೆ ನಡೆಸಿ, ಕಾರಿನ ಗಾಜುಗಳನ್ನು ಒಡೆದು ಹಾಕಿದ ಆರೋಪದ ಮೇರೆಗೆ ಹೇಮಂತ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾರ್‌ನಲ್ಲಿ ಮದ್ಯಪಾನ ಮಾಡುತ್ತಿದ್ದ ಹೇಮಂತ್, ಪಕ್ಕದಲ್ಲಿದ್ದ ವ್ಯಕ್ತಿಯೊಂದಿಗೆ ಜಗಳವಾಡಿ ಹಲ್ಲೆ ನಡೆಸಿದ್ದಾನೆ. ಮಧ್ಯ ಪ್ರವೇಶಿಸಿದ ಕ್ಯಾಷಿಯರ್ ದೇವರಾಜ್ ಮೇಲೂ ಹಲ್ಲೆ ಮಾಡಿ, ಅವರ ಕಾರಿನ ಗಾಜುಗಳನ್ನು ಬಿಯರ್ ಬಾಟಲಿಯಿಂದ ಪುಡಿ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಲ್ಲದೆ, ಕ್ಯಾಶ್ ಕೌಂಟರ್‌ಗೆ ನುಗ್ಗಿ ಮದ್ಯದ ಬಾಟಲಿಗಳನ್ನೂ ಒಡೆದು ಹಾಕಿದ್ದಾನೆ. ಪ್ರಕರಣದಲ್ಲಿ ಭಾಗಿಯಾಗಿರುವ ಬಾಬು, ಇಂದ್ರ ಹಾಗೂ ಅಶೋಕ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *