ಶಿವಮೊಗ್ಗದಲ್ಲಿ ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದ ಆರೋಪಿ ಮಧುಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ನಡೆದಿದೆ. ಆರೋಪಿಯನ್ನು ಮಹಜರಿಗೆ ಕರೆದೊಯ್ಯುವ ವೇಳೆ ಆತ ಪೊಲೀಸ್ ಸಿಬ್ಬಂದಿ ಅಂಜನಪ್ಪ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಇನ್ಸ್‌ಪೆಕ್ಟರ್ ಹರೀಶ್ ಪಟೇಲ್ ಎಚ್ಚರಿಕೆ ನೀಡಿದರೂ ಹಾಗೂ ಏರ್ ಫೈರ್ ಮಾಡಿದರೂ ಮಧು ಶಾಂತವಾಗದ ಹಿನ್ನೆಲೆಯಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡ ಮಧು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್ಪಿ ಬಿ. ನಿಖಿಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡು ದಿನಗಳ ಹಿಂದೆ ಶಿವಮೊಗ್ಗದ ಗಾಂಧಿ ಬಜಾರ್‌ನ ಕರಿದೇವರ ಕೇರಿಯಲ್ಲಿ ನಡೆದ ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧು ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

