Breaking News

ಮನೆಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ

ಚಿಂತಾಮಣಿ ತಾಲೂಕಿನ ಸಂತೇಕಲ್ಲಹಳ್ಳಿಯಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆ ಹಾಗೂ ಆಕೆಯ ತಾಯಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಲಾವಣ್ಯ (32) ಮತ್ತು ಅವರ ತಾಯಿ ವೆಂಕಟರತ್ನಮ್ಮ ಗಾಯಗೊಂಡಿದ್ದು, ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ರಾಣಿ, ನೀಲಜಾ, ನಿತಿನ್ ರಾಜ್, ಶಶಿಕಲಾ ಹಾಗೂ ಪ್ರಿಯಾಂಕಾ ವಿರುದ್ಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚ್ಛೇದನ ಪ್ರಕರಣದ ವಿಚಾರವಾಗಿ ಉಂಟಾದ ವೈಷಮ್ಯದ ಹಿನ್ನೆಲೆಯಲ್ಲಿ ಆರೋಪಿಗಳು ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸ್ಥಳೀಯರು ಮಧ್ಯಪ್ರವೇಶಿಸಿ ಜಗಳ ಬಿಡಿಸಿದ್ದು, ರಾಜಿ ಪಂಚಾಯಿತಿ ಪ್ರಯತ್ನದಿಂದ ದೂರು ನೀಡುವುದು ವಿಳಂಬವಾಗಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *