ಧಾರವಾಡ ಕೇಂದ್ರ ಕಾರಾಗೃಹದಲ್ಲಿ ವಿಚಾರಾಧೀನ ಕೈದಿಗಳು ಜೈಲು ವಾರ್ಡನ್ ಮೇಲೆ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೈಲಿನ ಆವರಣದಲ್ಲಿ ಮುಕ್ತವಾಗಿ ಓಡಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಕೈದಿಗಳು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗದ ಹರ್ಷಾ ಕೊಲೆ ಪ್ರಕರಣದ ಆರೋಪಿಗಳಾದ ರಿಹಾನ್, ಕಾಶಿಫ್ ಹಾಗೂ ಡ್ರಗ್ಸ್ ಪ್ರಕರಣದ ಆರೋಪಿ ಫೈಜಲ್ ಜೈಲು ಸೆಲ್‌ನಿಂದ ಹೊರಬಂದು ವಾರ್ಡನ್ ಕಿರಣ್ ಘೋರ್ಪಡೆ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ವಾರ್ಡನ್ ಅವರ ಮುಖ ಮತ್ತು ತಲೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಜೈಲು ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಒಂದು ತಿಂಗಳ ಕಾಲ ಕುಟುಂಬ ಸದಸ್ಯರ ಭೇಟಿಗೆ ಹಾಗೂ ದೂರವಾಣಿ ಸಂಪರ್ಕಕ್ಕೆ ನಿಷೇಧ ಹೇರಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

