ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನೊಬ್ಬ 27 ವರ್ಷದ ಯುವತಿಯನ್ನು ಟ್ರಾಫಿಕ್ ಜಾಮ್ ನೆಪದಲ್ಲಿ ಮಧ್ಯರಾತ್ರಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಹೋದರಿಯ ಮನೆಗೆ ತೆರಳಲು ಕ್ಯಾಬ್ ಬುಕ್ ಮಾಡಿದ್ದ ಯುವತಿಯನ್ನು ಚಾಲಕ ನಿಗದಿತ ಮಾರ್ಗದಲ್ಲಿ ಕರೆದೊಯ್ಯದೆ ಸುಮಾರು ಒಂದೂವರೆ ಗಂಟೆಗಳ ಕಾಲ ನಗರದಲ್ಲಿ ಸುತ್ತಾಡಿಸಿದ್ದಾನೆ ಎನ್ನಲಾಗಿದೆ. ಬಳಿಕ ಆದೂರು ಕ್ರಾಸ್ ಸಮೀಪ ಕಾರು ನಿಲ್ಲಿಸಿ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಯುವತಿ ಪ್ರತಿರೋಧ ತೋರಿಸಿ ಸಂಬಂಧಿಕರಿಗೆ ಕರೆ ಮಾಡಿ ಸಹಾಯ ಕೋರಿದಾಗ, ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

