ಬೆಂಗಳೂರು ತಿಗಳರಪಾಳ್ಯದಲ್ಲಿ 22 ವರ್ಷದ ಭವಾನಿಯನ್ನು ಆಕೆಯ ಪತಿ ಚಂದ್ರಶೇಖರ್ ಅಲಿಯಾಸ್ ಚಂದನ್ ಉಸಿರುಗಟ್ಟಿಸಿ ಹತ್ಯೆ ಮಾಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಭವಾನಿ ಮತ್ತು ಚಂದನ್ ಕೆಲ ತಿಂಗಳ ಹಿಂದೆ ದೇವಸ್ಥಾನದಲ್ಲಿ ರಹಸ್ಯವಾಗಿ ವಿವಾಹವಾಗಿದ್ದರು ಎನ್ನಲಾಗಿದೆ. ಭವಾನಿ ಪಾಲಕರ ಒತ್ತಾಯದ ಮೇರೆಗೆ ಮತ್ತೊಂದು ಮದುವೆಗೆ ಒಪ್ಪಿಕೊಂಡಿದ್ದ ವಿಚಾರ ತಿಳಿದು ಚಂದನ್ ಆಕ್ರೋಶಗೊಂಡಿದ್ದ. ಈ ವಿಚಾರವಾಗಿ ನಡೆದ ಜಗಳದ ವೇಳೆ ವಿಷ ಕುಡಿಸಿ ಬಳಿಕ ಕುತ್ತಿಗೆ ಹಿಸುಕಿ ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಮದುವೆ ಫೋಟೋಗಳು ವೈರಲ್ ಆದ ಬಳಿಕ ಅನುಮಾನಗೊಂಡ ಕುಟುಂಬಸ್ಥರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

