ಹೊನ್ನಾವರ ತಾಲೂಕಿನಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮನೆಯೊಂದರಿಂದ 128 ಗ್ರಾಂ ಚಿನ್ನಾಭರಣ ಹಾಗೂ ನಗದು ಕಳವು ಮಾಡಲಾಗಿತ್ತು. ಪ್ರಮುಖ ಆರೋಪಿ ಧನುಷ್ ಶ್ರೀಧರ ಗೌಡ ಹಾಗೂ ಕಳವು ಮಾಡಿದ ಆಭರಣಗಳನ್ನು ಮಾರಾಟ ಮಾಡಲು ಸಹಕರಿಸಿದ್ದ ಗೌರೀಶ ಗಣಪತಿ ಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು ಅಡವಿಟ್ಟಿದ್ದ 127.5 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇದರ ಮೌಲ್ಯ ₹17.08 ಲಕ್ಷ ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

