Breaking News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 13.14 ಕೋಟಿ ರೂ ಮೌಲ್ಯದ ಗಾಂಜಾ ವಶ; ಆರು ಜನರ ಬಂಧನ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 13.14 ಕೋಟಿ ರೂ. ಮೌಲ್ಯದ 38.34 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಥಾಯ್ಲೆಂಡ್‌ನ ಬ್ಯಾಂಕಾಕ್‌ನಿಂದ ಬಂದಿದ್ದ ಆರು ಪ್ರಯಾಣಿಕರ ಲಗೇಜ್‌ಗಳಲ್ಲಿ ಈ ಮಾದಕ ವಸ್ತು ಪತ್ತೆಯಾಗಿದೆ. ತಪಾಸಣೆ ವೇಳೆ ಅನುಮಾನಾಸ್ಪದ ಬ್ಯಾಗ್‌ಗಳನ್ನು ಪರಿಶೀಲಿಸಿದ ಅಧಿಕಾರಿಗಳು ಗಾಂಜಾ ಪತ್ತೆಹಚ್ಚಿದ್ದು, ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಇದೇ ವೇಳೆ, ‘ಮಿಸೆಸ್ ಕೇರಳ 2025’ ವಿಜೇತೆ ಹರ್ಷ ಸನ್ನಿ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಣೆ ಆರೋಪದಡಿ ಬಂಧಿಸಲಾಗಿದೆ. ಬ್ಯಾಂಕಾಕ್‌ನಿಂದ ಬಂದಿದ್ದ ಅವರ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *