ಬೆಂಗಳೂರು: ಪೊಲೀಸ್ ಇಲಾಖೆಯ ದಾಖಲೆ ನಿರ್ವಹಣೆಯಲ್ಲಿನ ಲೋಪ ಹಾಗೂ ಹೈಕೋರ್ಟ್ ಮಾರ್ಗಸೂಚಿಗಳ ಪಾಲನೆಯಲ್ಲಿ ವೈಫಲ್ಯ ಕಂಡುಬಂದ ಹಿನ್ನೆಲೆಯಲ್ಲಿ 66 ಮಂದಿ ರೌಡಿಶೀಟರ್‌ಗಳು ರೌಡಿಪಟ್ಟಿಯಿಂದ ಹೊರಬಂದಿರುವ ಪ್ರಕರಣ ರಾಜ್ಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪೊಲೀಸ್ ದೂರು ಪ್ರಾಧಿಕಾರದ ಪರಿಶೀಲನೆಯಲ್ಲಿ ಸೂಕ್ತ ದಾಖಲೆಗಳು ಮತ್ತು ಸಮರ್ಪಕ ಕಾರಣಗಳನ್ನು ಪೊಲೀಸರು ಒದಗಿಸದಿರುವುದು ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ 66 ಮಂದಿಯ ಹೆಸರನ್ನು ರೌಡಿಪಟ್ಟಿಯಿಂದ ಕೈಬಿಡುವಂತೆ ಆದೇಶಿಸಲಾಗಿದೆ. ಇವರಲ್ಲಿ ಕುಖ್ಯಾತ ರೌಡಿಶೀಟರ್ ಸೈಲೆಂಟ್ ಸುನಿಲ್ ಹಾಗೂ ಒಂಟೆ ರೋಹಿತ್ ಹೆಸರುಗಳೂ ಸೇರಿವೆ ಎನ್ನಲಾಗಿದೆ. ರೌಡಿಸಂ ನಿಯಂತ್ರಣಕ್ಕೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ ಈ ಬೆಳವಣಿಗೆ ಪೊಲೀಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಕರಣ ಸಂಬಂಧ ಸರ್ಕಾರ ಮತ್ತು ಪೊಲೀಸ್ ಇಲಾಖೆ ಯಾವ ರೀತಿಯ ಸ್ಪಷ್ಟನೆ ನೀಡಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

