Breaking News

ರೆಸಾರ್ಟ್ಗೆ ನುಗ್ಗಿ ಪ್ರೇಮಿಗಳನ್ನ ಬೆದರಿಸಿ ಬೈಕ್ ಕಿತ್ತುಕೊಂಡು ಬಂದ ನಾಲ್ವರ ಬಂಧನ!

ಮೈಸೂರು: ಹುಣಸೂರು ಸಮೀಪದ ರೆಸಾರ್ಟ್‌ನಲ್ಲಿ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿ ಬೈಕ್ ಕಸಿದುಕೊಂಡು ಪರಾರಿಯಾಗಿದ್ದ ನಾಲ್ವರನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಹುಣಸೂರಿನ ವೀಲ್ ವಾಸಿಂ, ಶೋಯೆಬ್, ಅಜರ್ ಹಾಗೂ ಕೊಳವಿಗೆಯ ಶ್ರೀಕಾಂತ್ ಅಲಿಯಾಸ್ ಸಿರಿ ಬಂಧಿತ ಆರೋಪಿಗಳು. ಮೈಸೂರಿನ ಅಸ್ಲಂ ತನ್ನ ಪ್ರೇಯಸಿಯೊಂದಿಗೆ ರೆಸಾರ್ಟ್‌ಗೆ ಬಂದಿದ್ದ ವೇಳೆ ಆರೋಪಿಗಳು ಗಲಾಟೆ ನಡೆಸಿ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿ ಬೈಕ್ ಕಿತ್ತುಕೊಂಡು ಪರಾರಿಯಾಗಿದ್ದರು. ಬಳಿಕ ಬೈಕ್ ಅನ್ನು ಶ್ರೀಕಾಂತ್ ಬಳಿ ಅಡವಿಟ್ಟು ₹30 ಸಾವಿರ ಪಡೆದಿದ್ದರು ಎನ್ನಲಾಗಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *