ಹುಬ್ಬಳ್ಳಿಯಲ್ಲಿ ಕೆಪಿಟಿಸಿಎಲ್ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಆಮಿಷ ಒಡ್ಡಿ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಲು ಯತ್ನಿಸಿದ್ದ ಆರೋಪಿಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಮೂಲದ ವೆಂಕಟೇಶ ರಾಠೋಡ ಬಂಧಿತ ಆರೋಪಿ. ‘ಇಟ್ಸ್ ಮೀ ಅಮರ್ ಅಪ್ಡೇಟ್ಸ್’ ಎಂಬ ಯೂಟ್ಯೂಬ್ ಚಾನೆಲ್ ಮೂಲಕ ಲೈನ್‌ಮನ್ ಹುದ್ದೆಗಳನ್ನು ಕೊಡಿಸುವುದಾಗಿ ಹೇಳಿ, ಅಭ್ಯರ್ಥಿಗಳು ತಕ್ಷಣ ಹಣ ಸಿದ್ಧಪಡಿಸಿಕೊಳ್ಳುವಂತೆ ವಿಡಿಯೋದಲ್ಲಿ ಕರೆ ನೀಡಿದ್ದ. ಕೆಲಸ ಆಗದಿದ್ದರೆ ಹಣ ವಾಪಸ್ ನೀಡುವುದಾಗಿ ಭರವಸೆ ನೀಡಿ ಜನರನ್ನು ನಂಬಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ವೈರಲ್ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿದ ವಿದ್ಯಾನಗರ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತನ ಹಿಂದೆ ಇನ್ನೂ ಯಾರಾದರೂ ಕೈವಾಡವಿದೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

