Breaking News

ಪಿಕಪ್ ವಾಹನ ಪಲ್ಟಿ- ಅಕ್ರಮ ಜಾನುವಾರು ಸಾಗಾಟ ಬಯಲು

ಸುಬ್ರಹ್ಮಣ್ಯದಲ್ಲಿ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ಅಕ್ರಮ ಜಾನುವಾರು ಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ. ಅರಕಲಗೂಡು ನಿವಾಸಿಗಳಾದ ಚಂದ್ರಶೇಖರ್ ಮತ್ತು ಮೋಹನ್ ವಿರುದ್ಧ ಪ್ರಕರಣ ದಾಖಲಾಗಿದೆ. ಜೂನ್ 13ರ ರಾತ್ರಿ ಎರಡು ಹೋರಿಗಳನ್ನು ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಕುಲ್ಕುಂದ ಸಮೀಪ ತಿರುವಿನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಹೋರಿಗಳ ಕಾಲುಗಳನ್ನು ಕಟ್ಟಿ ಸಾಗಿಸಲಾಗುತ್ತಿದ್ದ ವಿಚಾರ ಬಹಿರಂಗವಾಗಿದೆ. ಘಟನೆ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ತನಿಖೆ ಮುಂದುವರಿದಿದೆ. ಈ ಹಿಂದೆ ಕೂಡ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಠದ ಸುತ್ತಮುತ್ತ ಜಾನುವಾರು ಕಳ್ಳತನ ಪ್ರಕರಣಗಳು ದಾಖಲಾಗಿದ್ದವು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *