Breaking News

ದಾವಣಗೆರೆಯಲ್ಲಿ ಭೀಕರ ಅಗ್ನಿ ದುರಂತ; ಒಂದರ ಬೆನ್ನಲ್ಲೇ 18 ಸಿಲಿಂಡರ್ ಸ್ಫೋಟ, ಇಬ್ಬರಿಗೆ ಗಂಭೀರ ಗಾಯ!

ದಾವಣಗೆರೆ ತಾಲೂಕಿನ ಹೆಚ್. ಕಲ್ಪನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಗೋದಾಮೊಂದರಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿ, 18ಕ್ಕೂ ಹೆಚ್ಚು ಗ್ಯಾಸ್ ಸಿಲಿಂಡರ್‌ಗಳು ಸರಣಿ ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಸಿಲಿಂಡರ್‌ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವಘಡದಲ್ಲಿ ಅನಿಲ್ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋದಾಮು ಜನವಸತಿ ಪ್ರದೇಶದಿಂದ ದೂರದ ಅಡಿಕೆ ತೋಟದಲ್ಲಿದ್ದ ಕಾರಣ ದೊಡ್ಡ ಪ್ರಮಾಣದ ಪ್ರಾಣಹಾನಿ ತಪ್ಪಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಫೋಟಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *