Breaking News

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸಾವು, ಐವರಿಗೆ ಗಾಯ

ರಾಯಚೂರು: ರಸ್ತೆಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ನಡೆದಿದೆ. ಟೈಯರ್ ರೋಡ್‌ನಲ್ಲಿ ಅಪಘಾತ ಸಂಭವಿಸಿದ್ದು, ರಾಯಚೂರಿನ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ (70) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿಯಲ್ಲಿನ ಮನೆ ದೇವರು ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ತೆರಳಿದ್ದ ಕುಟುಂಬ ವಾಪಸ್ ರಾಯಚೂರಿಗೆ ಮರಳುವಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಶೇಖರಪ್ಪ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕೃಷ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *